Articles

ಸೆಕೆಂಡ್ ಪಿಯುಸಿ ವಿದ್ಯಾರ್ಥಿಗಳಿಗೆ ಅದ್ಭುತ ಅವಕಾಶ ಕೊಟ್ಟ ಡಾ. ರಾಜಕುಮಾರ್ ಲೆರ್ನಿಂಗ್ ಆಪ್.

ಶಿಕ್ಷಣ ಎಂಬುದು ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಮಹತ್ವವನ್ನು ಪಡೆದಿದೆ. ಶಿಕ್ಷಣಕ್ಕಾಗಿ ಮಾಡಿದ ಖರ್ಚು ಎಂದೂ ವ್ಯರ್ಥವಲ್ಲ ಎನ್ನುವ ವಾಸ್ತವ ಅನೇಕರಿಗೆ ಅರಿವಾಗಿದೆ. ಕನ್ನಡ ಚಿತ್ರರಂಗದಲ್ಲಿ ಬಹಳ ದೊಡ್ಡ ಹೆಸರು ಮಾಡಿರುವ ಮೇರುನಟ ಡಾಕ್ಟರ್ ರಾಜ್ ಕುಮಾರ್ ಅವರ ಕುಟುಂಬವನ್ನು ದೊಡ್ಮನೆ ಎಂದೇ ಕರೆಯಲಾಗುತ್ತದೆ. ಈ ಕುಟುಂಬದ ಕುಡಿಗಳು ಕೇವಲ ಸಿನಿಮಾರಂಗಕ್ಕೆ ಮಾತ್ರವೇ ತಮ್ಮ ಸೇವೆಯನ್ನು ಸೀಮಿತ ಮಾಡಿಲ್ಲ. ಸಮಾಜಕ್ಕೆ ಒಳ್ಳೆಯದೆನಿಸುವ ಅನೇಕ ಸಾಮಾಜಿಕ ಚಟುವಟಿಕೆಗಳಲ್ಲೂ ಅವರು ತೊಡಗಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಕೆಲವೇ ದಿನಗಳ ಹಿಂದೆಯಷ್ಟೇ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣ ಕೈಗೆಟುಕುವಂತೆ ದೊರೆಯಬೇಕು ಎನ್ನುವ ಉದ್ದೇಶದಿಂದ ಡಾಕ್ಟರ್ ರಾಜಕುಮಾರ್ ಲರ್ನಿಂಗ್ ಆ್ಯಪ್ ಅನ್ನು ಲಾಂಚ್ ಮಾಡಿದ್ದಾರೆ.

ಇದೀಗ ಇದೇ ಆ್ಯಪ್ ಮೂಲಕ ಮತ್ತೊಂದು ಮಹತ್ವದ ಹೆಜ್ಜೆಯನ್ನು ಇಡಲು ಹೊರಟಿದೆ ಡಾಕ್ಟರ್ ರಾಜಕುಮಾರ್ ಲರ್ನಿಂಗ್ ಆ್ಯಪ್. ಈ ಆ್ಯಪ್ ನ ಮೂಲಕ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುವ ಕಾಯಕಕ್ಕೆ ಮುಂದಾಗಿದ್ದು, ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅಧ್ಯಯನ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಲು ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ವಿಜ್ಞಾನ ವಿಭಾಗದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗೆ ತಮ್ಮ ಹೆಸರನ್ನು ರಿಜಿಸ್ಟರ್ ಮಾಡಿಕೊಳ್ಳಬಹುದಾಗಿದೆ.

ಸ್ಕಾಲರ್ ಶಿಪ್ ಪಡೆಯಲು ಬಯಸುವ ವಿದ್ಯಾರ್ಥಿಗಳು ಡಾ. ರಾಜ್ ಕುಮಾರ್ ಲರ್ನಿಂಗ್ ಆ್ಯಪ್ ಅನ್ನು ಡೌನ್ಲೋಡ್ ಮಾಡಿಕೊಂಡು ಅದರ ಮೂಲಕ ಪ್ರವೇಶ ಪರೀಕ್ಷೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಸರು ನೊಂದಾವಣೆ ಮಾಡಿಕೊಳ್ಳಲು ಸೆಪ್ಟೆಂಬರ್ 17 ಕೊನೆಯ ದಿನಾಂಕವಾಗಿದ್ದು, ಸೆಪ್ಟೆಂಬರ್ 19ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಡಾ. ರಾಜ್ ಕುಮಾರ್ ಲರ್ನಿಂಗ್ ಆ್ಯಪ್ ನ ಕಡೆಯಿಂದ ನೀಡಲಾಗಿರುವ ಈ ಒಂದು ಉತ್ತಮ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡರೆ ಅವರ ಶೈಕ್ಷಣಿಕ ಪ್ರಗತಿಗೆ ಇದು ನೆರವಾಗಲಿದೆ.

Leave a Comment

Your email address will not be published. Required fields are marked *